ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ-ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಆಡಳಿತ ದಕ್ಷಿಣ ಕನ್ನಡ ಮತ್ತು ವಿಠಲ ಜೆಸಿಸ್ ಪ್ರೌಢಶಾಲೆ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ 17ರ ವಯೋಮಾನ ವಿಭಾಗದಲ್ಲಿ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ತಂಡವು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.


ತಂಡದಲ್ಲಿ ಜುವೆನಾ ಡ್ಯಾಝಲ್ ಕುಟಿನ್ಹ , ಸನ್ನಿಧಿ, ಹಾರ್ದಿಕ ಪಿ., ಜೆನಿಟ ಸಿಂಧು ಪಸನ್ನ, ಧನ್ಯ ಶ್ರೀ, ಜನನಿ ಪಿ ಗೌಡ, ಆಯಿಷತ್ ಶಹೀಮ, ಫಾತಿಮತ್ ಅಫ್ರಾ,ಹೆಚ್ ನಮೃತಾ ಶೆಟ್ಟಿ, ಉತ್ತಮ ಪ್ರದರ್ಶನ ನೀಡಿದರು. ಜುಏನಾ ಡ್ಯಾಝಲ್ ಕುಟಿನ್ಹಾ ಸವ್ಯಸಾಚಿ ಆಟಗಾರ್ತಿ ಹಾಗೂ ಸನ್ನಿಧಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಯವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here