







ಪುತ್ತೂರು :ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರಿನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17ರ ವಯೋಮಾನದ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.


ಐವರು ಕ್ರೀಡಾಪಟುಗಳಾದ ಪೂರ್ವಿ, ಸಿಂಚನ, ಮೋನಿಕಾ, ಮೋಕ್ಷ ಹಾಗೂ ಮಾನ್ಯ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರ ಪೈಕಿ ಸಿಂಚನ ಇವರು ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದರು. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಚಕ್ರಪಾಣಿ ಎ ವಿ ತರಬೇತು ನೀಡಿರುತ್ತಾರೆ.













