









ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ ಪ್ರಸಕ್ತ ಸಾಲಿನ 14 ರ ವಯೋಮಾನದ ಮಕ್ಕಳ ಟೇಕ್ವಾಂಡೋ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜುನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಟ್ಲ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಜಿಲ್ಲಾ ಮಟ್ಟದ ಟೇಕ್ವಾಂಡೋ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕೊಂಬೆಟ್ಟು ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾರ್ಥಿಗಳಾದ ತೃಷ್ಯಾ ಮತ್ತು ಲಿಪಿಕ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿರುತ್ತಾರೆ.
ತೃಷ್ಯಾ ಇವರು ಓಜಾಲ ನಿವಾಸಿ ಕೃಷ್ಣಪ್ಪ ಹಾಗೂ ಮಮತಾ ದಂಪತಿ ಪುತ್ರಿಯಾಗಿದ್ದು, ಲಿಪಿಕರವರು ಓಜಾಲ ನಿವಾಸಿ ಎಸ್. ಎಸ್. ಸಂಜೀವ ಮತ್ತು ಸುನಂದ ದಂಪತಿ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳಲ್ಲಿ ಯಾದಗಿರಿಯಲ್ಲಿ ಜರುಗಲಿರುವ ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾಂಜಲಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.













