ಜಿಲ್ಲಾಮಟ್ಟದ ನೆಟ್‌ಬಾಲ್ ಪಂದ್ಯಾಟ : ಕಾಂಚನ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ

0

ಉಪ್ಪಿನಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಕುಲಶೇಖರ ಮಂಗಳೂರು ಇವರ ಆಶ್ರಯದಲ್ಲಿ ಸೆಕ್ರೆಡ್ ಹಾಟ ಕಾಲೇಜಿನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಯ 17ರ ವಯೋಮಾನದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡದ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


10ನೇ ತರಗತಿಯ ವೈಶಾಖ್ ಜಿ., ಪ್ರೀತಂ, ೯ನೇ ತರಗತಿಯ ತನುಷ್ ಎಸ್., ರಿತೇಶ್ ಹಾಗೂ ಗೌತಮ್ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಮುಖ್ಯಶಿಕ್ಷಕ ರಾಧಾಕೃಷ್ಣ ಎಸ್., ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸುಭಾಶ್ಚಂದ್ರ ಕೆ.ಅವರು ಎಸ್‌ಡಿಯಂ ಸ್ಪೋರ್ಟ್ಸ್ ಕ್ಲಬ್ ಹಾಗೂ ಎಸ್‌ಡಿಯಂ ಆಡಳಿತ ಮಂಡಳಿಯ ಸಹಕಾರದೊಂದಿಗೆ ತರಬೇತಿ ನೀಡಿದ್ದಾರೆ

LEAVE A REPLY

Please enter your comment!
Please enter your name here