







ರಾಮಕುಂಜ: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವುದನ್ನು ರಾಮಕುಂಜ ನೇತ್ರಾವತಿ ತುಳುಕೂಟ ಸ್ವಾಗತಿಸಿದೆ.


ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಹಲವು ವರ್ಷಗಳಿಂದ ಸರಕಾರಕ್ಕೆ ಮನವಿ, ಒತ್ತಡ ತರಲಾಗುತ್ತಿತ್ತು. ಇದೀಗ ರಾಜ್ಯ ಸರಕಾರ ತುಳು ಭಾಷೆಗೆ ೨ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ತೀರ್ಮಾನ ಕೈಗೊಂಡಿರುವುದು ತುಳುವರು ಸಂಭ್ರಮ ಪಡುವಂತೆ ಆಗಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಹಾಗೂ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಸಂಬಂಧ ಸರಕಾರಕ್ಕೆ ಕ್ಲಪ್ತ ಸಮಯದಲ್ಲಿ ವರದಿ ಸಲ್ಲಿಸಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಮೋಹನ್ ಆಳ್ವರವರಿಗೆ ಅಭಿನಂದನೆ ಸಲ್ಲಿಸುವುದಾಗಿ ನೇತ್ರಾವತಿ ತುಳುಕೂಟದ ಅಧ್ಯಕ್ಷ, ಕಡಬ ತಾಲೂಕು ಕಡೀರ ತುಳು ಸಮ್ಮೇಳನದ ಅಧ್ಯಕ್ಷರೂ ಆದ ಕೆ.ಸೇಸಪ್ಪ ರೈ ರಾಮಕುಂಜ ಹೇಳಿದ್ದಾರೆ.













