ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ, ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 25 ಸಾವಿರ ರೂ.ದೇಣಿಗೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ 25 ಸಾವಿರ ರೂ.ದೇಣಿಗೆ ನೀಡಲಾಯಿತು.

ಸೆ.೧೨ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆದ ಕಾಮಧೇನು ಮಹಿಳಾ ಸಹಕಾರ ಸಂಘದ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ದೇಣಿಗೆ ಹಸ್ತಾಂತರಿಸಿದರು. ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಕೋಶಾಧಿಕಾರಿ ಸುಧೀರ್‌ಕುಮಾರ್ ಅವರು ದೇಣಿಗೆ ಸ್ವೀಕರಿಸಿದರು.

LEAVE A REPLY

Please enter your comment!
Please enter your name here