ಸ.ಹಿ.ಪ್ರಾ. ಶಾಲೆ ಸಾಮೆತ್ತಡ್ಕ: ಮಹಾ ಪೋಷಕರ ಸಭೆ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಮರಿಯಾ ಅಶ್ರಫ್‌ಗೆ ಸನ್ಮಾನ

0

ಪುತ್ತೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕದಲ್ಲಿಸೆ.19ರಂದು ಮಹಾ ಪೋಷಕರ ಸಭೆ ನಡೆಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಮರಿಯಾ ಅಶ್ರಫ್ ಅವರನ್ನು ಶಾಲೆಯ ಎಸ್‌ಡಿಎಂಸಿ, ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್, ಶಿಕ್ಷಕರು, ಪೋಷಕರು ಹಾಗೂ ಅಡುಗೆ ಸಿಬ್ಬಂದಿ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್, ಎಸ್‌ಡಿಎಂಸಿ ಅಧ್ಯಕ್ಷ ಶಿವಪ್ರಸಾದ್, ಟ್ರಸ್ಟ್ ಕಾರ್ಯಾಧ್ಯಕ್ಷ ವೆಂಕಟ್ ರಾಜ್, ಸಿಆರ್‌ಪಿ ಶಶಿಕಲಾ, ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್, ಎಸ್‌ಡಿಎಂಸಿ ಶಿಕ್ಷಣ ತಜ್ಞ ದಿನೇಶ್ ಕಾಮತ್, ಉಪಾಧ್ಯಕ್ಷೆ ಪವಿತ್ರ, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್ ಹಾಗೂ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಝ್ ಉಪಸ್ಥಿತರಿದ್ದರು.

ಸಭೆಯಲ್ಲಿ ನಿಕಟಪೂರ್ವ ಎಸ್‌ಡಿಎಂಸಿ ಅಧ್ಯಕ್ಷ ಪಂಚಾಕ್ಷರಿ, ಮುಖ್ಯಗುರು ಜಲಜ ಕೆ, ಅಂಗನವಾಡಿ ಸಿಬ್ಬಂದಿ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here