ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸಲು ಪ್ರಯತ್ನ : ಶಾಸಕ ಅಶೋಕ್ ರೈಯವರಿಗೆ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಗೌರವಾರ್ಪಣೆ

0

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸುವಲ್ಲಿ ಮಹತ್ವದ ಪ್ರಯತ್ನ ನಡೆಸಿದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಶ್ರೀ ದೇವಿಯ ಭಕ್ತರ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಸೆ.20ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.


ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈ ಅವರನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಉತ್ಸವ ಸಮಿತಿ ಸದಸ್ಯರು ಸಹಿತ ಹಲವರು ಅಭಿನಂದಿಸಿ ಗೌರವಿಸಿದರು. ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here