ಮಾಜಿ ಸಚಿವ ರಮಾನಾಥ ರೈ ಅವರ ಕಾರು-ಖಾಸಗಿ ಬಸ್ ನಡುವೆ ಅಪಘಾತ

0

ಪುತ್ತೂರು: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿದೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಕಾರು ಮತ್ತು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ರಮಾನಾಥ ರೈ ಅವರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here