







ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆದ ಅಂತರ್ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.


50+ ವಯೋಮಾನದ ವಿಭಾಗದಲ್ಲಿ 5 ಕಿ.ಮೀ. ವೇಗದ ನಡಿಗೆ ಹಾಗೂ ಜಾವೆಲಿನ್ ಎಸೆತದಲ್ಲಿ ಚಿನ್ನ ಮತ್ತು ಹೈಜಂಪ್ನಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.



ಇವರು ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿದ್ದು, ಕಳೆದ ಐದಾರು ವರ್ಷಗಳಿಂದ ಮಾಸ್ಟರ್ಸ್ ಅಥ್ಲೆಟಿಕ್ಸ್ ಹಾಗೂ ಮ್ಯಾರಥಾನ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.










