







ಪುತ್ತೂರು: ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ, ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಬೆಟ್ಟಂಪಾಡಿಯ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ‘ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-21’ರ ಅಂಗವಾಗಿ ಗೌರವಿಸಿ ಅಭಿನಂದಿಸಲಾಯಿತು.


ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಕನ್ನಡದ ಪೇಟ, ಶಾಲು ಹಾಗೂ ಮೌಲ್ಯಯುತ ಕನ್ನಡ ಪುಸ್ತಕಗಳನ್ನು ನೀಡಿ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಗೌರವಿಸಲಾಯಿತು. ಗಡಿನಾಡು ಶ್ರೇಯೋಭಿವೃದ್ಧಿ ಟ್ರಸ್ಟ್ ಆರ್ಲಪದವು ಇದರ ಅಧ್ಯಕ್ಷ ಡಾ. ಹಾಜಿ ಅಬೂಬಕ್ಕರ್ ಎಸ್. ಆರ್ಲಪದವು, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್,ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ. ಧರ್ಮಪಾಲ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಂದ್ರ ರೈ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ನವೀನ್ ರೈ ಚೆಲ್ಯಡ್ಕ, ಚಿಗುರೆಲೆ ಸಾಹಿತ್ಯ ಬಳಗದ ಅಧ್ಯಕ್ಷ ಚಂದ್ರಮೌಳಿ ಕಡಂದೇಲು, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶಾಲಿನಿ ಬಿ. ಶೆಟ್ಟಿ ಹಾಗೂ ನಾರಾಯಣ ಡಿ, ಸರಕಾರಿ ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು, ಗ್ರಾಮ ಸಾಹಿತ್ಯ ಸಂಭ್ರಮದ ಸಂಯೋಜಕ ನಾರಾಯಣ ಕುಂಬ್ರ ಉಪಸ್ಥಿತರಿದ್ದರು. ಆಶಾಮಯ್ಯ, ಆಶಾ ಅಡೂರ್, ಸುಪ್ರಿತ ಚರಣ್ ಪಾಲಪ್ಪೆ, ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಗಿರೀಶ್ ಕೊಯಿಲ, ಶ್ರೀಶ ವಾಸವಿ ತುಳುನಾಡು ಅವರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.













