







ಉಪ್ಪಿನಂಗಡಿ: ವಿದ್ಯಾರ್ಥಿ ಸ್ನೇಹಿ ಕಾಲೇಜು ಎನಿಸಿಕೊಂಡ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ಸ್ಮರ್ಧಾತ್ಮಕ ಪರೀಕ್ಷಾ ತರಬೇತಿ ಸುಲಭವಾಗಿ ದೊರೆಯಬೇಕೆನ್ನುವ ನಿಟ್ಟಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಹಾಗೂ ನೀಟ್ ತರಬೇತಿಯನ್ನು ಆರಂಭಿಸಲಾಯಿತು.


ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಜೀಜ್ ಬಸ್ತಿಕ್ಕಾರ್ ಮಾತನಾಡಿ, ವಾರದಲ್ಲಿ ನಾಲ್ಕು ದಿನ ಬೆಳಗ್ಗೆ ಮತ್ತು ಸಂಜೆ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ಸ್ಮರ್ಧಾತ್ಮಕ ಸಿದ್ಧತೆಗೆ ಇದು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡುಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಎಂ. ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕರು ಈ ಸಂದರ್ಭ ಉಪಸ್ಥಿತರಿದ್ದರು.













