ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೌಷ್ಟಿಕತೆ, ಆರೋಗ್ಯ ಮತ್ತು ನೈರ್ಮಲ್ಯೀಕರಣ ಕುರಿತು ಮಾಹಿತಿ

0

ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸೆ. 19 ರಂದು ನಡೆದ ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಲೀಲಾವತಿ ಬಿ.ಎಡ್. ಕಾಲೇಜಿನ ತರಬೇತಿ ವಿದ್ಯಾರ್ಥಿನಿ ಜಯಶ್ರೀ ಅವರು ಪೌಷ್ಟಿಕತೆ, ಆರೋಗ್ಯ ಮತ್ತು ನೈರ್ಮಲ್ಯೀಕರಣ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರ ಸೇವಿಸುವುದು, ಶುದ್ಧವಾದ ನೀರು ಕುಡಿಯುವುದು, ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವುದು ಅಗತ್ಯವೆಂದು ಜಯಶ್ರೀ ತಿಳಿಸಿದರು.

ಪೌಷ್ಟಿಕ ಆಹಾರದ ಮಹತ್ವ, ಕೈಗಳನ್ನು ಸ್ವಚ್ಛವಾಗಿ ತೊಳೆಯುವ ವಿಧಾನ ಮತ್ತು ಸ್ವಚ್ಛತೆಯ ಅಭ್ಯಾಸಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here