







ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಕೆಯ್ಯೂರು ಇದರ ಪದವಿಪೂರ್ವ ಕಾಲೇಜು ವಿಭಾಗದ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಕೆಪಿಎಸ್ ಕೆಯ್ಯೂರು ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.


ಪಂದ್ಯಾಟವನ್ನು ಕೆಪಿಎಸ್ ಕೆಯ್ಯೂರು ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಎ.ಕೆ. ಜಯರಾಮ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಅಯ್ಯೂಬ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಹಸೀನಾ ಬಾನು ಎಸ್. ಇ. ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.



ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ಅರುಣ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಬಾಬು ಎಂ., ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮಿತ್ ರಾಜ್, ನಿವೃತ್ತ ದೈಹಿಕ ಶಿಕ್ಷಕ ಮೋನಪ್ಪ ಪಟ್ಟೆ, ಎಸ್.ಡಿ.ಎಂ.ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಪಂದ್ಯಾಟದ ತೀರ್ಪುಗಾರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸುಪ್ರೀತಾ ಕೆ., ಮೋಕ್ಷಾ, ಕೀರ್ತನಾ, ಜಯಲಕ್ಷ್ಮಿ ಹಾಗೂ ನಿಶ್ಮಿತಾ ಪ್ರಾರ್ಥಿಸಿದರು. ಉಪನ್ಯಾಸಕ ಇಸ್ಮಾಯಿಲ್ ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಉಮಾಶಂಕರಿ ಎಸ್. ಕೆ. ವಂದಿಸಿದರು. ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯಾಟದ ಫಲಿತಾಂಶ:
ಒಟ್ಟು 17 ತಂಡಗಳು ಭಾಗವಹಿಸಿದ್ದ ಈ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಅಭೂತಪೂರ್ವ ಸಾಧನೆ ಮಾಡಿದೆ.
ಬಾಲಕರ ವಿಭಾಗ: ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.
ಬಾಲಕಿಯರ ವಿಭಾಗ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಉಪ್ಪಿನಂಗಡಿ ಪ್ರಥಮ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜು ಪುತ್ತೂರು ದ್ವಿತೀಯ ಸ್ಥಾನ ಗಳಿಸಿತು.
ಸರಣಿ ಶ್ರೇಷ್ಠ ಪ್ರಶಸ್ತಿ:
ಉತ್ತಮ ಆಟಗಾರ (ಬಾಲಕರ ವಿಭಾಗ): ಅಕ್ಷಜ್ (ಇಂದ್ರಪ್ರಸ್ಥ ಪ.ಪೂ. ಕಾಲೇಜು),ಉತ್ತಮ ಆಟಗಾರ್ತಿ (ಬಾಲಕಿಯರ ವಿಭಾಗ): ಸವ್ಯ (ಇಂದ್ರಪ್ರಸ್ಥ ಪ.ಪೂ. ಕಾಲೇಜು) ಪ್ರಶಸ್ತಿ ಪಡೆದುಕೊಂಡರು.










