







ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ತಾಲೂಕು ಮಟ್ಟದ 14 ಹಾಗೂ 17 ವರ್ಷದೊಳಗಿನ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ದರ್ಬೆ ಪಾಂಗಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 17 ವರ್ಷ ವಯೋಮಾನದ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.


ಶಾಲೆಯ ಪ್ರಾಂಶುಪಾಲರಾದ ಭಗಿನಿ ಅನಿತಾ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್, ನಿರಂಜನ್ ಮತ್ತು ಅಕ್ಷಯ್ ಅವರ ನಿರಂತರ ತರಬೇತಿ ನೀಡಿರುತ್ತಾರೆ.













