







ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಾ ಡಿ. ಅವರು 30 ನಿಮಿಷಗಳಲ್ಲಿ ಕೈಗಳನ್ನು ಸೊಂಟದಲ್ಲಿ ಹಿಡಿದುಕೊಂಡು ಮುಂಗೈಗಳನ್ನು ಜೊತೆಯಾಗಿ ಹಿಂದಕ್ಕೆ ಹಾಗೂ ಮುಂದಕ್ಕೆ ಮುಟ್ಟಿಸುವ ವಿಶ್ವದಾಖಲೆ ಪ್ರದರ್ಶನ ಸೆ.26ರಂದು ಅಪರಾಹ್ನ 1.30ರಿಂದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ನೀಡಲಿದ್ದಾರೆ.


ಈ ಪ್ರದರ್ಶನವು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಏಷ್ಯಾ ವಿಭಾಗದ ಮುಖ್ಯಸ್ಥರಾದ ಡಾ| ಮನೀಷ್ ವೈಷ್ಣೋಯಿ ಅವರ ಸಮ್ಮುಖದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ್ ರಾಮಕುಂಜ ಉದ್ಘಾಟಿಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಬೆಳ್ತಂಗಡಿಯ ಧಾರ್ಮಿಕ ಮುಂದಾಳು ಕಿರಣ್‌ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ತಾ.ಪಂ.ಮಾಜಿ ಸದಸ್ಯೆ, ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ಹರೀಶ ಶಾಂತಿ, ರಾಮಕುಂಜ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಪ್ರಶಾಂತ್ ಆರ್.ಕೆ., ಮಾಲತಿ, ಸುಚೇತಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ.ಅವರು ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಧರ್ಣಪ್ಪ ಪೂಜಾರಿ ಮತ್ತು ವನಿತಾ ದಂಪತಿ ಪುತ್ರಿಯಾದ ಈಕೆ ಈ ಹಿಂದೆ ತನ್ನ ಕೈಗಳನ್ನು ಸೊಂಟದಲ್ಲಿ ಹಿಡಿದುಕೊಂಡು ಮುಂಗೈಯನ್ನು ಹಿಂದಕ್ಕೆ ಹಾಗೂ ಮುಂದಕ್ಕೆ ನಿಮಿಷಕ್ಕೆ 172 ಸಲ ಮುಟ್ಟಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದರು.














❤️🔥❤️🔥❤️🔥❤️🔥🥰