







ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.


ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಸ್ತುತ ಶೈಕ್ಷಣಿಕ ಪ್ರಗತಿ, ತರಗತಿಯಲ್ಲಿನ ಕಲಿಕೆಯ ಸ್ಥಿತಿ, ವಿಷಯವಾರು ಸಾಧನೆ ಹಾಗೂ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಲಾಯಿತು.ವಿದ್ಯಾರ್ಥಿಗಳು ನಿಯಮಿತವಾಗಿ ತರಗತಿಗೆ ಹಾಜರಾಗುವುದು, ಪ್ರತಿದಿನದ ಪಾಠವನ್ನು ಅಂದೇ ಪುನರಾವರ್ತಿಸುವುದು, ಸಂದೇಹಗಳನ್ನು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳುವುದು ಹಾಗೂ ಪರೀಕ್ಷೆಗೆ ವ್ಯವಸ್ಥಿತವಾಗಿ ಸಿದ್ಧತೆ ನಡೆಸುವುದು ಅಗತ್ಯ ಎಂದು ತಿಳಿಸಲಾಯಿತು.




ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ವ್ಯಕ್ತಿತ್ವ ವಿಕಸನ, ಸಮಯಪಾಲನೆ, ಶಿಸ್ತು, ಜವಾಬ್ದಾರಿಯುತ ನಡವಳಿಕೆ ಮತ್ತು ಉತ್ತಮ ಅಭ್ಯಾಸಗಳ ಬಗ್ಗೆಯೂ ಪೋಷಕರಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಅಧ್ಯಯನದ ಮೇಲೆ ನಿರಂತರ ನಿಗಾ ವಹಿಸಿ, ಆತ್ಮವಿಶ್ವಾಸ ಮತ್ತು ಕಲಿಕಾ ಆಸಕ್ತಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಲಾಯಿತು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ., ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪೋಷಕರೊಂದಿಗೆ ಪಾಲ್ಗೊಂಡಿದ್ದರು.










