







ಅಧ್ಯಕ್ಷರಾಗಿ ಹರೀಶ್ ಮುಂಡಾಳ,ಉಪಾಧ್ಯಕ್ಷೆಯಾಗಿ ಪೂರ್ಣಿಮಾ ಪ್ರಕಾಶ್ ಆಯ್ಕೆ
ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆಯು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಹರೀಶ್ ಮುಂಡಾಳ ಮತ್ತು ಉಪಾಧ್ಯಕ್ಷೆಯಾಗಿ ಪೂರ್ಣಿಮಾ ಪ್ರಕಾಶ್ ಅವರು ಆಯ್ಕೆಯಾದರು.
ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಾಳ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ನೂತನ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಆಡಳಿತ ಅಧಿಕಾರಿ ಹೇಮಾನಾಗೇಶ್ ರೈ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ ವಂದಿಸಿದರು.















