








ಪುತ್ತೂರು: ಕಾಸರಗೋಡು ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಷಷ್ಠ ಚಾತುರ್ಮಾಸ್ಯದ ಸಲುವಾಗಿ ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠದಲ್ಲಿ ಬುಧವಾರ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ರಿ. ಇದರ ತಂಡದಿಂದ ‘ನೃತ್ಯೋಹಂ’ ಭರತನಾಟ್ಯ ಪ್ರದರ್ಶನ ನಡೆಯಿತು.




ನೃತ್ಯಗುರು ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ನೃತ್ಯ ಕಾರ್ಯಕ್ರಮ ನೀಡಿದರು. ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿಯವರು
ಫಲಮಂತ್ರಾಕ್ಷತೆ ನೀಡಿ ಕಲಾವಿದರನ್ನು ಹರಸಿದರು.













