







ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಿಂದ ಆಯೋಜಿಸಲಾಗಿದ್ದ ‘ನಮಾಮಿ ಭಾರತಂ’ ಸಮೂಹ ಗಾಯನ ಕಾರ್ಯಕ್ರಮದ ಅಂಗವಾಗಿ, ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೆ.25 ರಂದು ‘ವಂದೇ ಮಾತರಂ’ ಗೀತೆಯನ್ನು ಸಾಮೂಹಿಕವಾಗಿ ಗಾಯನ ಮಾಡಿದರು. ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ 660 ಮಕ್ಕಳು ಹಾಗೂ 32 ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.













