






ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ವತಿಯಿಂದ ‘ನಮಾಮಿ ಭಾರತ’ ಶೀರ್ಷಿಕೆಯಡಿಯಲ್ಲಿ ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಪ್ರವರ್ತಿತ ವಿದ್ಯಾಸಂಸ್ಥೆಯಾದ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರುಗಳಾದ ಆಶಾ ಬೆಳ್ಳಾರೆ ಅವರು ಕಾರ್ಯಕ್ರಮದ ಉದ್ದೇಶ ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ಚಂದ್ರ, ಕೋಶಾಧಿಕಾರಿ ಅಶೋಕ್ ಕುಂಬ್ಳೆ, 827 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು.













