







ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ರಜತ ಸಂಭ್ರಮದ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಅ.11ರಂದು ಶ್ರೀ ಗುರುದೇವಾನಂದ ಸ್ವಾಮೀಜಿರವರ ದಿವ್ಯ ಮಾರ್ಗದರ್ಶನದಲ್ಲಿ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಜರಗಲಿರುವುದು.


ಆ ಪ್ರಯುಕ್ತ ಅ.3ರಂದು ಬೆಳಿಗ್ಗೆ ಗಂಟೆ 10.30ರಿಂದ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಭಾವಗೀತೆ, ಕನ್ನಡ ಭಾಷಣ, ಪ್ರಬಂಧ ರಚನೆ, ಕವಿತಾ ರಚನೆ, ಕಥಾ ರಚನೆ, ವರ್ಣಚಿತ್ರ ರಚನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.



ಭಾಗವಹಿಸುವ ಸ್ಪರ್ಧಾಳುಗಳು ಸೆ. 30ರ ಮೊದಲು ತಮ್ಮ ಹೆಸರನ್ನು ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಶಾಲಾ ಕಛೇರಿಯಲ್ಲಿ ನೋಂದಾಯಿಸಿಕೊಳ್ಳುವುದು. ಭಾವಗೀತೆ ಹಾಗೂ ಇತರ ಸ್ಪರ್ಧೆಗಳ ವಿಷಯಗಳನ್ನು ಸ್ಪರ್ಧೆಯ ದಿನ 1 ಗಂಟೆ ಮುಂಚಿತವಾಗಿ ನೀಡಲಾಗುವುದು. ಕಥೆ ಹಾಗೂ ಕವಿತೆಗಳು (ಸ್ಥಳದಲ್ಲಿಯೇ) ಸ್ವರಚಿತವಾಗಿರಬೇಕು. ಸ್ಪರ್ಧೆಗೆ ಬೇಕಾದ ಸಾಮಾಗ್ರಿಗಳನ್ನು ಸ್ಪರ್ಧಾಳುಗಳೇ ತರತಕ್ಕದ್ದು.ಸ್ಪರ್ಧಾಳುಗಳು ಸ್ಪರ್ಧೆಗೆ ಬರುವಾಗ ತಮ್ಮ ಶಾಲೆಯ ಮುಖ್ಯಶಿಕ್ಷಕರಿಂದ ಅಧಿಕೃತ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುವುದು. ಸ್ಪರ್ಧಾಳುಗಳಿಗೆ ಪ್ರಯಾಣ ಭತ್ತೆಯನ್ನು ನೀಡಲಾಗುವುದು. ಪ್ರಥಮ ಬಹುಮಾನ ರೂ. 5000, ದ್ವಿತೀಯ ಬಹುಮಾನ ರೂ. 3000 ನೀಡಲಾಗುವುದು. ಸ್ಪರ್ಧಾ ವಿಜೇತರಿಗೆ ಮಕ್ಕಳ ಸಾಹಿತ್ಯ ಸಮ್ಮೇಳನದಂದು ಗಣ್ಯರ ಸಮ್ಮುಖದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿರವರು ಬಹುಮಾನವನ್ನು ಪ್ರಶಸ್ತಿ ಪತ್ರದೊಂದಿಗೆ ನೀಡಿ ಗೌರವಿಸಲಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9901792124/7349432357 ಯನ್ನು ಸಂಪರ್ಕಿಸುವುದು.









