








ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಸಂಸ್ಥಾನ, ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ಸಹಯೋಗದಲ್ಲಿ ಸೆಪ್ಟೆಂಬರ್ 25ರಂದು “ವಂದೇ ಮಾತರಂ”ಗೀತೆಯ 150ನೇ ವರ್ಷಾಚರಣೆಯ ಸಲುವಾಗಿ ಸಾಮೂಹಿಕ ಗಾಯನ ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಕ್ಷತಾ ಎ. ಪಿ. ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಮೂಹ ಗಾಯನ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಒಟ್ಟು 400 ಮಂದಿ ಭಾಗವಹಿಸಿದರು.












