







ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಶಿಕ್ಷಣ ನಿಧಿ ಸಂಗ್ರಹಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಶೇ.98 ರಷ್ಟು ಸಂಗ್ರಹ ಸಾಧನೆ ಮಾಡಿದೆ.


ಈ ಸಾಧನೆಗಾಗಿ ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ಮತ್ತು ವ್ಯವಸ್ಥಾಪಕ ನಾಗಪ್ರಸಾದ್ ಅವರನ್ನು ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಗೌರವಿಸಿದರು.













