ನಾಳೆ (ಸೆ.27) ಮುಕ್ರಂಪಾಡಿಯಲ್ಲಿ ಗಿರಿಜಾ ಕಲ್ಯಾಣದ ಪೂರ್ವಭಾವಿ ಸಭೆ

0

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ 4ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ವಿಶೇಷ ಗಿರಿಜಾ ಕಲ್ಯಾಣದ ಪೂರ್ವಭಾವಿ ಸಭೆ ಸೆ.28ರಂದು ಸಂಜೆ 4 ಗಂಟೆಗೆ ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ.

ಕಳೆದ ಮೂರು ವರ್ಷಗಳಿಂದ ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಕಳೆದ ವರ್ಷ ಸಂಘ ಶತಾಬ್ಧಿಯ ಅಂಗವಾಗಿ ಶ್ರೀನಿವಾಸ ಕಲ್ಯಾಣೋತ್ಸವದೊಂದಿಗೆ ಸಾಮೂಹಿಕ ವಿವಾಹ ಹಾಗೂ ಮಠಾಧೀಶರ ಉಪಸ್ಥಿತಿಯಲ್ಲಿ ಹಿಂದವೀ ಸಾಮ್ರಾಜ್ಯೋತ್ಸವವನ್ನೂ ಆಯೋಜಿಸಲಾಗಿತ್ತು.

ನಾಲ್ಕನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ವಿಶೇಷವಾಗಿ ಗಿರಿಜಾ ಕಲ್ಯಾಣೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಇದರ ಪೂರ್ವಸಿದ್ಧತೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.

ಸಭೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here