ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾರ್ಥಿನಿ ಖುಷಿ ಕೆ.ಎಂ.ಗೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಬೆಂಗಳೂರಿನ ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ. ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿ ಪಡೆದಿದ್ದಾರೆ.ಇವರ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here