ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

0

ನಿಡ್ಪಳ್ಳಿ: ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಸೆ.26 ರಂದು ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ನಾಯಕತ್ವ ಗುಣ, ಸೃಜನಶೀಲ ಚಿಂತನೆ ಹಾಗೂ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಯುವ ಉದ್ಯಮಿ ವಿಷ್ಣುಕುಮಾರ್ ಅವರು ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಿದ ಅವರು, ತಂಡದ ಕಾರ್ಯನಿರ್ವಹಣೆ, ಸಮಯ ನಿರ್ವಹಣೆ, ಪರಿಣಾಮಕಾರಿ ಸಂವಹನ, ನಿರ್ಧಾರ ಕೈಗೊಳ್ಳುವಿಕೆ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಪ್ರೊ. ರಾಮಚಂದ್ರ ಡಿ, ಪ್ಲೇಸ್‌ಮೆಂಟ್ ಸೆಲ್ ಸಹ ಸಂಚಾಲಕ ಡಾ.ರಾಮಚಂದ್ರ ಡಿ. ಹಾಗೂ ಗ್ರಂಥಪಾಲಕ ಶ್ರೀರಾಮ ಕೆ. ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಯೋಜಕರು ಹಾಗೂ ಪ್ಲೇಸ್‌ಮೆಂಟ್ ಸೆಲ್ ಸಂಚಾಲಕ ಪ್ರೊ.ಅನಂತ ಭಟ್ ಅವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here