ಸಿ.09, ಸಿ.15 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

0

ಅ.5ರೊಳಗೆ ದಂಡರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಲು ಸೂಚನೆ

ಪುತ್ತೂರು: ತಾಂತ್ರಿಕ ಶಿಕ್ಷಣ ಇಲಾಖೆಯ ಸಿ.09 ಮತ್ತು ಸಿ.15 ಪಠ್ಯಕ್ರಮದಡಿ ಪ್ರವೇಶ ಪಡೆದು ವ್ಯಾಸಂಗ ಪೂರ್ಣಗೊಳಿಸದೆ, ಪ್ರಸ್ತುತ ಬಾಕಿ ವಿಷಯಗಳನ್ನು ಹೊಂದಿರುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ವ್ಯಾಸಂಗ ಪೂರ್ಣಗೊಳಿಸಲು ಕಾಲಮಿತಿ ಸಡಿಲಿಕೆ ನೀಡಲಾಗಿದ್ದು, ಏಕರೂಪದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಸರ್ಕಾರದ ಆದೇಶ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಯವರ ಸುತ್ತೋಲೆಯಂತೆ ಈ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್/ಡಿಸೆಂಬರ್ 2026ರ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು ಅ.5, 2026ರೊಳಗೆ ದಂಡರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here