ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆ, ವಾರ್ಷೀಕ ಫಿಲೋ ಸೇವಾಮೃತ-2026

0

ನಾನಲ್ಲ, ನೀನು ಎಂಬ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು- ಡಾ| ಶೇಷಪ್ಪ ಕೆ.

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ-2026’ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಯೋಜನಾ ಸಂಯೋಜಕರಾದ ಡಾ|ಶೇಷಪ್ಪ ಕೆ. ದೀಪ ಬೆಳಗಿಸುವ ಮೂಲಕ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್ ಕಾರ್ಯಕರ್ತರು ಸದಾ ಸತ್ಯದ ದೃಷ್ಟಿಕೋನದಲ್ಲಿ ಕಾರ್ಯನಿರ್ವಹಿಸಬೇಕು. ‘ಎನ್‌ಎಸ್‌ಎಸ್’ ಎಂದರೆ ‘ನಾನಲ್ಲ, ನೀನು’ ಎಂಬ ಸೇವಾ ಮನೋಭಾವ. ಸಣ್ಣ-ಸಣ್ಣ ಸೇವಾ ಕಾರ್ಯಗಳ ಮೂಲಕ ಉತ್ತಮ ಸಮುದಾಯವನ್ನು ನಿರ್ಮಿಸಬೇಕು. ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮನಸ್ಸಿನಲ್ಲಿ ಇಚ್ಛಾಶಕ್ತಿ ಇರಬೇಕು. ಗ್ರಾಮೀಣ ಸಂಸ್ಕೃತಿಗೆ ಮಹತ್ವ ನೀಡುವುದರೊಂದಿಗೆ ಯಾವುದೇ ಕಾರ್ಯವನ್ನು ಸಂಪೂರ್ಣ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ವಿಜಯಕುಮಾರ್ ಮೊಳೆಯಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು. ಎನ್‌ಎಸ್‌ಎಸ್ ಅಧಿಕಾರಿ ಡಾ| ಕೆ. ಚಂದ್ರಶೇಖರ್‌ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಎನ್‌ಎಸ್‌ಎಸ್ ಅಧಿಕಾರಿ ಡಾ. ಕೆ. ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಎನ್‌ಎಸ್‌ಎಸ್ ಘಟಕದ ನಾಯಕ ಬೃಂದಾನ್ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಅಪೂರ್ಣ ಮತ್ತು ತಂಡದವರು ಪ್ರಾರ್ಥಿಸಿ, ಎನ್‌ಎಸ್‌ಎಸ್ ಅಧಿಕಾರಿ ಪುಷ್ಪಾ ಎನ್. ಸ್ವಾಗತಿಸಿದರು. ಎನ್‌ಎಸ್‌ಎಸ್ ನಾಯಕ ಸಾಯಿಪ್ರತೀಶ್ ವಂದಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ಕಾರ್ತಿಕ್ ಪಿ.ಸಿ., ಎನ್‌ಎಸ್‌ಎಸ್ ಘಟಕದ ನಾಯಕರಾದ ಸ್ಪಂದನ ಹಾಗೂ ಶಿಲ್ಪಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here