ಎಸ್‌ಆರ್ ಬ್ಯುಲ್ಡರ‍್ಸ್‌ನ ಮಾಲಕ, ಯುವ ಉದ್ಯಮಿ ಶಿವಪ್ರಸಾದ್ ಇಜ್ಜಾವುರವರಿಗೆ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ’ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

0

ಪುತ್ತೂರು: ಇಲ್ಲಿನ ಶ್ರೀರಾಮ ಸೌಧ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಎಸ್‌ಆರ್ ಬ್ಯುಲ್ಡರ‍್ಸ್ ಆಂಡ್ ಡೆವಲಪ್ಪರ‍್ಸ್ ಸಂಸ್ಥೆಯ ಮಾಲಕ, ಯುವ ಉದ್ಯಮಿ ಶಿವಪ್ರಸಾದ್ ಇಜ್ಜಾವು ಅವರಿಗೆ ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ’ಕನ್ನಡ ಪ್ರಭ’ ಹಾಗೂ ’ಏಷ್ಯಾನೆಟ್ ಸುವರ್ಣ ನ್ಯೂಸ್’ ವತಿಯಿಂದ ಅತ್ಯಂತ ಪ್ರತಿಷ್ಠಿತ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ 2026ನ್ನು ಸೆ.26ರಂದು ಸಂಜೆ ಬೆಂಗಳೂರಿನ ತಾಜ್ ಯಶವಂತಪುರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಗಿದೆ.


ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮದ್, ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್, ಚಲನಚಿತ್ರ ನಟಿ ಬೃಂದಾ ಆಚಾರ್ಯ, ಪರ್ವ ಗ್ರೂಪ್ ಸಂಸ್ಥಾಪಕ ನೀಲೇಶ್ ಎಚ್.ಪಿ., ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್‌ನ ಸಮೂಹ ಸಂಪಾದಕೀಯ ನಿರ್ದೇಶಕರಾದ ರವಿ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಶಿವಪ್ರಸಾದ್ ಇಜ್ಜಾವು ಅವರು ಪತ್ನಿ, ಮಕ್ಕಳೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here