ಸಾಮಾಜಿಕ ಸೇವೆಯಲ್ಲಿ ಸಕ್ರಿಯವಿರುವ ಸಂಘ-ಸಂಸ್ಥೆಗಳಿಗೆ ‘ಮಜ್ಜಾರಡ್ಕ ವಿಷ್ಣು ಯುವ ಸಿರಿ ಪ್ರಶಸ್ತಿ 2026’ ಅರ್ಜಿ ಆಹ್ವಾನ

0

ಪುತ್ತೂರು: ಜಿಲ್ಲೆ ಹಾಗೂ ಪುತ್ತೂರು ತಾಲೂಕಿನ ಯುವಕ-ಯುವತಿ ಮಂಡಲಗಳು ಮತ್ತು ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ‘ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕ’ ಸಂಘಟನೆಯು ‘ಮಜ್ಜಾರಡ್ಕ ವಿಷ್ಣು ಯುವ ಸಿರಿ ಪ್ರಶಸ್ತಿ 2026’ ಗೌರವಕ್ಕೆ ಅರ್ಜಿ ಆಹ್ವಾನಿಸಿದೆ.

​ನಿರಂತರವಾಗಿ ಸಾಮಾಜಿಕ ಹಾಗೂ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಘಟನೆಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ನವೆಂಬರ್ 1 ರಂದು ನಡೆಯಲಿರುವ 9 ನೇ ವರ್ಷದ ‘ಕೆಸರ್ ಡೊಂಜಿ ಸಮಾರೋಪ ಸಮಾರಂಭ’ದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

​ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜಿಲ್ಲೆ ಹಾಗೂ ತಾಲೂಕಿನ ಅರ್ಹ ಯುವಕ-ಯುವತಿ ಮಂಡಲಗಳು ಹಾಗೂ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನಾಂಕವಾಗಿದೆ.

​ಹೆಚ್ಚಿನ ಮಾಹಿತಿಗಾಗಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರು ಹಾಗೂ ಶ್ರೀ ವಿಷ್ಣು ಯುವಶಕ್ತಿ ಬಳಗ ಮಜ್ಜಾರಡ್ಕದ ಸಂಘಟನಾ ಕಾರ್ಯದರ್ಶಿಯಾಗಿರುವ ರಾಜೇಶ್ ಕೆ. ಮಯೂರ (ಮೊಬೈಲ್ ಸಂಖ್ಯೆ: 9483285830) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here