







ಕಾಣಿಯೂರು: ಸರ್ಕಾರಿ ಪ್ರೌಢಶಾಲೆ ದೋಳ್ಪಾಡಿ 8ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಇಂಜಿನಿಯರ್ ಗಳ ದಿನಾಚರಣೆ ಯ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ನಡೆದ ಸರ್.ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರ ರಚನೆಯ ಅಂತರ್ ಶಾಲಾ ಸ್ಪರ್ಧೆಯಲ್ಲಿ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರಳಾಗಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಪಡೆದಿರುತ್ತಾರೆ. ಸಾನಿಧ್ಯ ಇವರು ದೋಲ್ಪಾಡಿಯ ಪುಳಿಮರಡ್ಕ ನಿವಾಸಿ ಚಂದ್ರಶೇಖರ ಆಚಾರ್ಯ ಹಾಗೂ ಹರಿಣಾಕ್ಷಿ ಇವರ ಪುತ್ರಿ.












