







ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸುದಾನ ವಸತಿಯುತ ಶಾಲೆ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಸೆ.27ರಂದು ಜಿಲ್ಲಾಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕರ ಕ್ರಿಕೆಟ್ ಪಂದ್ಯಾಟ ನಡೆಯಿತು.



ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದಾನ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್ ವಹಿಸಿದ್ದರು. ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಯಾನ್ ಕ್ರಾಸ್ತಾ ದೀಪ ಬೆಳಗಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯಾ ರುತ್ ಕ್ಯಾಸ್ಟಲಿನೊ ಪ್ರಾಸ್ತಾವಿಕ ಮಾತನಾಡಿದರು. ಸುದಾನ ಶಾಲೆಯ ಮುಖ್ಯಶಿಕ್ಷಕಿ ಶೋಭಾ ನಾಗರಾಜ್ ಸ್ವಾಗತಿಸಿದರು.



ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುದಾನ ಶಾಲಾ ಕೋಶಾಧಿಕಾರಿ ಆಸ್ಕರ್ ಆನಂದ್ ಅಧ್ಯಕ್ಷತೆ ವಹಿಸಿದ್ದರು. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕು ತಂಡ (ಸುದಾನ ವಸತಿಯುತ ಶಾಲೆ) ಪ್ರಥಮ ಸ್ಥಾನ ಪಡೆದುಕೊಂಡರೆ, ಮಂಗಳೂರು ಉತ್ತರ ದ್ವಿತೀಯ ಸ್ಥಾನ ಪಡೆದುಕೊಂಡಿತು. 14ರ ವಯೋಮಾನದ ಬಾಲಕರ ವಿಭಾಗದಲ್ಲೂ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.










