ಚುನಾವಣಾ ಆಯೋಗದ ಅಕ್ರಮ ಓಟ್ ಚೋರಿ ಆರೋಪ : ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಪಾದಯಾತ್ರೆ – ಪುತ್ತೂರಿನಿಂದ ಹಲವು ಮಂದಿ ಭಾಗಿ

0

ಪುತ್ತೂರು: ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಬಂಧನಕ್ಕೆ ಆಗ್ರಹಿಸಿ ಸೆ.28ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನಲ್ಲಿ ನಡೆದ ಪಾದಯಾತ್ರೆ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಹಲವು ಮಂದಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


ಪಾದಯಾತ್ರೆಯು ಮಂಗಳೂರು ಪಂಪ್‌ವೆಲ್ ಮಹಾವೀರ ವೃತ್ತದಿಂದ ಪ್ರಾರಂಭಗೊಂಡು ಪಡೀಲ್‌ನಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ತನಕ ನಡೆಯಿತು. ಈ ಪಾದಯಾತ್ರೆಯಲ್ಲಿ ಜಿಲ್ಲಾ, ರಾಜ್ಯ ನಾಯಕರ ಜೊತೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜ, ಪೂಡ ಸದಸ್ಯ ಅನ್ವ ಖಾಸಿಂ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಬನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ರೋಶನ್ ರೈ ಬನ್ನೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಉಷಾ ಅಂಚನ್ ಸಹಿತ ಹಲವು ಮಂದಿ ನಾಯಕರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here