ಮುಂಡೂರು ಶಾಲಾ ವಿದ್ಯಾರ್ಥಿಗಳಿಗೆ  ಉಚಿತ ಬ್ಯಾಗ್ ವಿತರಣೆ

0

ನಿಡ್ಪಳ್ಳಿ;  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಂಡೂರು-1 ಇಲ್ಲಿಯ ವಿದ್ಯಾರ್ಥಿಗಳಿಗೆ  ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ  ರಜತ ಮಹೋತ್ಸವದ ಅಂಗವಾಗಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ  ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಸೆ.23 ರಂದು ನಡೆಯಿತು.

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ  ಸಂಘ ಪುತ್ತೂರು ಇದರ ನಿರ್ದೇಶಕರಾದ  ಹರೀಶ್ ಬೋರ್ಕರ್ ಕೆ , ನಿಡ್ಪಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕ ಬಿಪಿನ್ ಚಂದ್ರ ಬಿ ಡಿ , ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ ನಾಯ್ಕ ಹಾಗೂ ಮುಖ್ಯಗುರು ಆಶಾ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

 ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಗುರು ಆಶಾ ಎಸ್ ಸ್ವಾಗತಿಸಿದರು, ಸಹ ಶಿಕ್ಷಕಿ ಸೌಮ್ಯ ವಂದಿಸಿದರು,  ಬಿಪಿನ್ ಚಂದ್ರ ಇವರು ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯರಾದ ಭಾರತಿ, ಕು.ಜಲಜಾಕ್ಷಿ ಮತ್ತು ಕು.ಸುಮಿತ್ರ ಸಹಕರಿಸಿದರು.

ಶಾಲಾ ಮಕ್ಕಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಾಗ್ರಿಗಳನ್ನು ಒದಗಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ಗೆ ಶಾಲೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here