







ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ರೆಂಜ ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷ ಸೋಮಶೇಖರ ಉಡ್ಡಂಗಲ ಇವರ ಅಧ್ಯಕ್ಷತೆಯಲ್ಲಿ ಸೆ.27 ರಂದು ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ಲೆಕ್ಕಪರಿಶೋಧಕಿ ಉಶಾಲತಾ ಯೋಜನೆಯ ನಿಯಮ ಮತ್ತು ವಿವಿಧ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ನಳಿನಿ ಪಾರ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಕುಸುಮಾ ಮಿತ್ತಡ್ಕ ವರದಿ ವಾಚಿಸಿದರು. ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ವಂದಿಸಿದರು.ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.













