ಕರಾಟೆ: ನೆಲ್ಯಾಡಿ ಜ್ಞಾನೋದಯ ಬೆಥನಿಯ ಮಹಮ್ಮದ್ ಹಿಶಾಂ ಅಂತರಾಷ್ಟ್ರೀಯ ಮಟ್ಟಕ್ಕೆ

0

ನೆಲ್ಯಾಡಿ: ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಮಹಮ್ಮದ್ ಹಿಶಾಂ ಅವರು ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಬಯಿಯಲ್ಲಿ ನಡೆದ 3ನೇ ಯುಜಿಕೆಎಫ್‌ಐ ರಾಷ್ಟ್ರೀಯ ಒಬ್ಲಿಕ್ ಕರಾಟೆ ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದ ಹಿಶಾಂ ಅವರು ಉತ್ತಮ ಪ್ರದರ್ಶನ ನೀಡಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಇವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಗಳಿಸಿದ್ದಾರೆ.

ಅ.5ರಿಂದ 11ರ ತನಕ ಮಹಾರಾಷ್ಟ್ರದ ಪುಣೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ನಡೆಯಲಿದೆ. ಈತನಿಗೆ ಕರಾಟೆ ಶಿಕ್ಷಕಿ ಅಲ್ಫೋನ್ಸ ತರಬೇತಿ ನೀಡಿದ್ದರು. ಮಹಮ್ಮದ್ ಹಿಶಾಂ ಅವರು ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ, ಸಾಮಾಜಿಕ ಕಾರ್ಯಕರ್ತ ಕೆ.ಕೆ. ಇಸ್ಮಾಯಿಲ್ ಕೋಲ್ಪೆ ಅವರ ಪುತ್ರ.

LEAVE A REPLY

Please enter your comment!
Please enter your name here