







ಪುತ್ತೂರು: “ಯುವ ಸಂಸತ್ ಸ್ಪರ್ಧೆಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಾಯೋಗಿಕ ಮಾದರಿಯನ್ನು ನೀಡುವ ಮೂಲಕ ಅವರಲ್ಲಿ ಜ್ಞಾನ ಗಟ್ಟಿಯಾಗಿ ಬೇರೂರಲು ಪೂರಕವಾಗುತ್ತವೆ” ಎಂದು ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ. ಹೇಳಿದರು.


ಅ.1ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟುನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.




ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ ಪಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ನೋಡಲ್ ಅಧಿಕಾರಿ ಹರಿಪ್ರಸಾದ್, ಪುತ್ತೂರು ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ದ.ಕ. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶ್ಯಾಮಲಾ ಉಪಸ್ಥಿತರಿದ್ದರು.
ತಾಲೂಕಿನ 5 ಪ್ರೌಢಶಾಲೆಗಳ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಸಂಸತ್ ಕಾರ್ಯಕಲಾಪಗಳನ್ನು ಪ್ರದರ್ಶಿಸಿದವು. ಅತ್ಯುತ್ತಮ ನಿರ್ವಹಣೆ ತೋರಿದ ಐದು ಮಂದಿ ವಿದ್ಯಾರ್ಥಿಗಳನ್ನು ಜಿಲ್ಲಾ ಹಂತದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.










