







ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಕಾರ್ಯಕ್ರಮದ ಅಂಗವಾಗಿ ಸಭಾಂಗಣದಲ್ಲಿ ಜಯಂತಿ ಆಚರಣೆಯ ನಂತರ, ‘VB-G RAM G’ ಯೋಜನೆಯಡಿ ‘ಮಹಾತ್ಮ ಗಾಂಧಿ ಸುಧಾರಣೋತ್ಸವ’ ವಿಶೇಷ ಗ್ರಾಮಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಗ್ರಾಮದ ಅಭಿವೃದ್ಧಿ ಹಾಗೂ ನೈರ್ಮಲ್ಯದ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.ಗ್ರಾಮಸಭೆಯ ಬಳಿಕ ಕೊಳ್ತಿಗೆ–ಪೆರ್ಲಂಪಾಡಿ ರಸ್ತೆ ಬದಿಯಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಕೈಗೊಂಡರು.




ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಶ್ರವಣ್ ಕುಮಾರ್, ಲೆಕ್ಕ ಸಹಾಯಕ ಜಯಪ್ರಸಾದ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ಯಾಮ್ ಸುಂದರ್ ರೈ, ನಿಕಟಪೂರ್ವ ಉಪಾಧ್ಯಕ್ಷ ಪ್ರಮೋದ್, ಮಾಜಿ ಉಪಾಧ್ಯಕ್ಷೆ ನಾಗವೇಣಿ ಕೆ., ವರ್ತಕರ ಸಂಘದ ಅಧ್ಯಕ್ಷ ಹರಿಪ್ರಸಾದ್, ಚಿಗುರು ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ ಪಂಚಾಯತಿನ ಮಾಜಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಿ.ಎ. ಬ್ಯಾಂಕ್ ಸಿಬ್ಬಂದಿವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಿ ಶ್ರಮದಾನಕ್ಕೆ ಕೈಜೋಡಿಸಿದರು.










