







ಕಾಣಿಯೂರು: ದ. ಕ. ಜಿ. ಪ. ಹಿ. ಪ್ರಾ. ಶಾಲೆ ನಾಣಿಲದಲ್ಲಿ ಮಹಾತ್ಮಾ ಗಾಂಧೀಜಿಯವರ 157ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿಯವರು ಮಹಾನ್ ಚೇತನಗಳಿಗೆ ಗೌರವ ಪೂರ್ವಾಕ ನಮನಗಳನ್ನು ಸಲ್ಲಿಸಿದರು.
ಶಾಲಾ ಪ್ರಭಾರ ಮುಖ್ಯ ಗುರುಗಳಾದ ನಂದಿನಿ ಎಸ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕರಾದ ಸುನಿಲ್ ಗಾಂಧೀಜಿ ಹಾಗೂ ಶಾಸ್ತ್ರಿಯವರ ಬಗ್ಗೆ ಮಾತನಾಡಿ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದ ಭಾಗವಹಿಸಿದ್ದರು.












