







ನಿಡ್ಪಳ್ಳಿ: ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಅ.1 ರಂದು ನಡೆಯಿತು.


ಕುಕ್ಕುಪುಣಿಯಿಂದ ಶ್ರೀ ಶಾಂತದುರ್ಗಾ ದೇವಸ್ಥಾನದವರೆಗೆ ಸುಮಾರು ಒಂದು ಕಿಮೀ ದೂರದವರೆಗಿನ ರಸ್ತೆ ಬದಿಯಲ್ಲಿದ್ದ ತ್ಯಾಜ್ಯ, ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛಗೊಳಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ, ಕಾರ್ಯದರ್ಶಿ ಶಿವರಾಮ ಮೂಲ್ಯ ಹಾಗೂ ಸಿಬ್ಬಂದಿಗಳು, ಸ್ವಚ್ಚತಾ ಘಟಕದ ಸಿಬ್ಬಂದಿಗಳು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು ಪಾಲ್ಗೊಂಡರು.













