ಶಾಂತಿನಗರ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ-ನೇತ್ರ ತಪಾಸಣಾ ಶಿಬಿರ

0

ಪುತ್ತೂರು: ಕರ್ನಾಟಕ ಸರಕಾರ ಶಾಲಾ ಫ್ರೌಢ ಶಿಕ್ಷಣ ಇಲಾಖೆ, ಸರಕಾರಿ ಪ್ರೌಢ ಶಾಲೆ ಶಾಂತಿನಗರ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಅ.2ರಂದು ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ನಡೆಯಿತು.


ಕಾರ್ಯಕ್ರಮ ಬೆಳಿಗ್ಗೆ 8 ಗಂಟೆಗೆ ಕವಿತಾ ದಿನಕರ ಬಳಗ ಪುತ್ತೂರು ಅವರ ದೇಶಭಕ್ತಿ ಗೀತೆ ಗಾಯನದೊಂದಿಗೆ ಪ್ರಾರಂಭಗೊಂಡಿತು. ಅಕ್ಷರ ಸಂತ , ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಗಾಂಧಿ ಪ್ರತಿಮೆ ಅನಾವರಣಗೊಳಿಸಿ ಗಾಂಧೀಜಿಯವರ ಆಶಯದಂತೆ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಗ್ರಾಮೀಣ ಶಾಲೆಗಳಿಂದ ಮಾತ್ರ ಸಾದ್ಯ ಎಂದರು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುರೇಶ್, ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ, ಡಾ.ಬಿ.ರಘು ಶಾಂತಿನಗರ, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಮಳ ರಾಮಚಂದ್ರ, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸದಸ್ಯ ಡಾ.ರಾಜರಾಮ್ ಕೆ.ಬಿ, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಸದಸ್ಯ ಜಾನ್ ಕೆನ್ಯೂಟ್, ಪ್ರಗತಿಪರ ಕೃಷಿಕ ಮೋನಪ್ಪ ಗೌಡ ಪಮ್ಮನಮಜಲು, ನಿವೃತ್ತ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಹಾಗೂ ಶಾಂತಿನಗರ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಧನಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಜೆಎಸ್ ಡಬ್ಲ್ಯೂ ಫೌಂಡೇಶನ್ ಹಾಗೂ ಮಾನವ ಬಂಧುತ್ವ ವೇದಿಕೆ ಪುತ್ತೂರು ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ನಡೆಯಿತು.ಸುಮಾರು150 ಜನ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡರು. 30 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಾಗವಹಿಸಿದವರಿಗೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ,ಮುಖ್ಯ ಶಿಕ್ಷಕಿ ಧನಲಕ್ಷ್ಮೀ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್.ಎಸ್.ನೆಕ್ಕಿಲಾಡಿ ಧನ್ಯವಾದ ಸಲ್ಲಿಸಿದರು. ಶಾಲಾ ಶಿಕ್ಷಕಿ ಜ್ಯೋತಿರಾಣಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಶಿಕ್ಷಕರು,ಅಕ್ಷರ ದಾಸೋಹ ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮವು ಪುತ್ತೂರು ಸುದ್ದಿ ಯೂಟ್ಯೂಬ್ ಚಾನೆಲ್ ಹಾಗೂ ಪೇಸ್ಬುಕ್ ನಲ್ಲಿ ನೇರಪ್ರಸಾರಗೊಂಡಿತು.

LEAVE A REPLY

Please enter your comment!
Please enter your name here