ಪುತ್ತೂರು ಬಿಜೆಪಿ ರೈತ ಮೋರ್ಚಾ ಸಭೆ

0

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಗೆ ನಿರ್ಧಾರ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ರೈತ ಮೋರ್ಚಾದ ಮಾಸಿಕ ಸಭೆ ಅ.1ರಂದು ಪುತ್ತೂರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು.


ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25ನೇ ವರ್ಷದ ಆಡಳಿತದ ‘ಸೇವಾ ಸಂಕಲ್ಪ ಅಭಿಯಾನ’ದ ರೂಪುರೇಷೆಗಳ ಕುರಿತು ಗಣ್ಯರು ಮಾರ್ಗದರ್ಶನ ನೀಡಿದರು. ಅ.12ರಂದು ರೈತ ಪ್ರಮುಖರ ಸಭೆ ಕರೆಯಲು ಹಾಗೂ ಮುಂದಿನ ತಿಂಗಳು ರೈತ ಮೋರ್ಚಾ ವತಿಯಿಂದ, ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು.


ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್, ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್.ಸಿ ನಾರಾಯಣ, ಜಿಲ್ಲಾ ಕಾರ್ಯದರ್ಶಿ ಹಾಗೂ ರೈತ ಮೋರ್ಚಾ ಜಿಲ್ಲಾ ಪ್ರಭಾರಿಗಳಾದ ಪುಷ್ಪಾ ಮೇದಪ್ಪ, ಜಿಲ್ಲಾ ಪ್ರಶಿಕ್ಷಣ ವರ್ಗದ ಸಹ ಸಂಚಾಲಕ ಪುರುಷೋತ್ತಮ್ ಮುಂಗ್ಲಿಮನೆ, ರೈತ ಮೋರ್ಚಾ ಅಧ್ಯಕ್ಷ ಶರತ್‌ಚಂದ್ರ ಬೈಪಾಡಿತ್ತಾಯ, ಪ್ರಧಾನ ಕಾರ್ಯದರ್ಶಿ ಯತೀಶ್ ದೇವ ಸಂಟ್ಯಾರು ಹಾಗೂ ಲಕ್ಷ್ಮಣ ಬೆಳ್ಳಿಪ್ಪಾಡಿ ಸೇರಿದಂತೆ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


ಸಭೆಯ ಆರಂಭದಲ್ಲಿ, ಇತ್ತೀಚೆಗೆ ನಿಧನರಾದ ಪಕ್ಷದ ನಿಷ್ಠಾವಂತ ಹಿರಿಯ ಸದಸ್ಯರು, ಜಿಲ್ಲಾ ರೈತ ಮೋರ್ಚಾದ ಮಾಜಿ ಅಧ್ಯಕ್ಷರೂ ಆಗಿದ್ದ ಸಂಕಪ್ಪ ಗೌಡ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here