ಸ್ವಚ್ಛತಾ ಕಾರ್ಯದ ಮೂಲಕ ಸೇವಾ ಸಂಕಲ್ಪ-ಬಿಜೆಪಿ ನಗರ ಮಂಡಲದಿಂದ ಸ್ವಚ್ಛತಾ ಹಿ ಸೇವಾ’ ಅಭಿಯಾನ

0

ಪುತ್ತೂರು: ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯ ಸ್ಮರಣಾರ್ಥ ಆಯೋಜಿಸಲಾಗುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ನಗರ ಮಂಡಲದ ವತಿಯಿಂದ ಸ್ವಚ್ಛತಾ ಹಿ ಸೇವಾ – ಸೇವಾ ಮೇರಾ ಯೋಗದಾನ್’ ಕಾರ್ಯಕ್ರಮದಡಿ ಅ.2ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲದ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡು ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಸ್ವಚ್ಛ ಪರಿಸರ ನಿರ್ಮಾಣದ ಜೊತೆಗೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಿದರು.

LEAVE A REPLY

Please enter your comment!
Please enter your name here