







ಪುತ್ತೂರು: ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.


ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.










