ಉಪ್ಪಿನಂಗಡಿ: ಕ್ರೀಡಾಕೂಟದಲ್ಲಿ ಇಂಡಿಯನ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

0

ಉಪ್ಪಿನಂಗಡಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲೆ, ಹಿರೆಬಂಡಾಡಿಯಲ್ಲಿ ನಡೆದ 14 ಮತ್ತು 17 ವರ್ಷದೊಳಗಿನ ಉಪ್ಪಿನಂಗಡಿ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

17 ವರ್ಷದೊಳಗಿನ ಬಾಲಕರ ಹೈಜಂಪ್‌ನಲ್ಲಿ 10ನೇ ತರಗತಿಯ ಮೊಹಮ್ಮದ್ ಶಲೀಲ್ ಪ್ರಥಮ ಸ್ಥಾನ ಹಾಗೂ ಸುಜಾಸ್ ಅಲಿ ಕೆ. ದ್ವಿತೀಯ ಸ್ಥಾನ ಗಳಿಸಿದ್ದಾರೆ. 14 ವರ್ಷದೊಳಗಿನ ಬಾಲಕಿಯರ ಶಾಟ್‌ಪುಟ್‌ನಲ್ಲಿ 8ನೇ ತರಗತಿಯ ನಫೀಸಾ ಸನಾ ಹಾಗೂ ಬಾಲಕರ ಶಾಟ್‌ಪುಟ್‌ನಲ್ಲಿ ಮುಹಮ್ಮದ್ ನಿಹಾನ್ ಹಕೀಮ್ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here