







ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.


ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಅನಿತಾ ಜೆ ರೈ, ಭವಾನಿ ಸಿ, ಸಂತೋಷ್ ಕೆ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಸ್ವಾಗತಿಸಿ, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ವಂದಿಸಿದರು.













