







ನೆಲ್ಯಾಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಿರಂತರ ಮೂರು ವರ್ಷ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100 ತೇರ್ಗಡೆ ಫಲಿತಾಂಶ ಪಡೆದುಕೊಂಡಿರುವ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ಸೆ.27ರಂದು ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಎಸ್ಡಿಎಂಸಿ ಪದವಿ ಪೂರ್ವ ಕಾಲೇಜು ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಉಜಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ-2026 ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಧಾನಪರಿಷತ್ ಸದಸ್ಯ ಬೋಜೇಗೌಡ ಅವರು ಪ್ರಶಸ್ತಿ ವಿತರಿಸಿದರು. ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಡಾ.ವರ್ಗೀಸ್ ಕೈಪನಡ್ಕ ಅವರು ಪ್ರಶಸ್ತಿ ಸ್ವೀಕರಿಸಿದರು.












