ಏಷ್ಯಾಡ್‌ನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರಿಂದ ಅಭಿನಂದನೆ

0

ಮಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಬಂದ ಬಳಿಕ ದೇಶದ ಕ್ರೀಡಾಳುಗಳು ಕ್ರೀಡಾ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಸಾಧನೆಗೈಯುತ್ತಿರುವುದು ಶ್ಲಾಘನೀಯ. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಏಷ್ಯಾಡ್‌ನಲ್ಲಿ ಭಾರತ ಚಿನ್ನದ ಪದಕಗಳನ್ನು ಪಡೆಯುತ್ತಿದೆ. ನಮ್ಮ ಜಿಲ್ಲೆಯವರಾಗಿ ನೆಲೆಸಿರುವ ಪೂವಮ್ಮ ಅವರ ಸಾಧನೆ ನಮಗೆಲ್ಲರಿಗೂ ಹೆಮ್ಮೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಹೇಳಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ವತಿಯಿಂದ ಸತೀಶ್ ಕುಂಪಲ ಅವರು ಪೂವಮ್ಮ ಅವರಿಗೆ ಅಭಿನಂದನೆ ಸಲ್ಲಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗಡೆ, ಕಾರ್ಯದರ್ಶಿ ಅಮಿತ್ ರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ವಸಂತ್ ಜೆ. ಪೂಜಾರಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ್ ಅಕ್ಷಯ್ ಆಳ್ವ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಹುಲ್ ಶೆಟ್ಟಿ ಮತ್ತಿತರರು ಜೊತೆಯಲ್ಲಿದ್ದರು.

LEAVE A REPLY

Please enter your comment!
Please enter your name here