ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು : ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಂ ಉಡುಪಿ, ಶ್ರೀ ಕಾಣಿಯೂರು ರಾಮತೀರ್ಥ ಮಠ, ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ
ಅ 11ರಿಂದ ಅ 20ರವರೆಗೆ ನಡೆಯಲಿರುವ ಶ್ರೀ ನವರಾತ್ರಿ ಉತ್ಸವದ ಪ್ರಯುಕ್ತ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯಕ್ರಮವು ಅ 4ರಂದು ನಡೆಯಿತು. ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಭಕ್ತಾಧಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here